ಆರ್ಡರ್ ಆಫ್ ದಿ ಸ್ಟಾರ್ ಆ್ಯಂಡ್ ಕೀ ಆಫ್ ದಿ ಇಂಡಿಯನ್ ಓಷನ್ ಮಾರಿಷಸ್‌ನಲ್ಲಿ ಅತ್ಯುನ್ನತ ಗೌರವವಾಗಿದೆ. ಇದನ್ನು ರಾಷ್ಟ್ರ ಮತ್ತು ಅದರ ಜನರಿಗೆ ಅಸಾಧಾರಣ ಸೇವೆಗಾಗಿ ನೀಡಲಾಗುತ್ತದೆ. ಈ ವಿಶಿಷ್ಟ ಮನ್ನಣೆ ಪಡೆದ ಐದನೇ ವಿದೇಶಿ ಪ್ರಜೆಯೆಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಪಾತ್ರರಾಗಿದ್ದಾರೆ ಎಂದು ರಾಮ್‌ಗೂಲಮ್ ಹೇಳಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಮಾರಿಷಸ್ ಅಧ್ಯಕ್ಷ ಧರಮ್ ಗೋಖೂಲ್ ಅವರನ್ನು ಭೇಟಿಯಾದರು. ಇಬ್ಬರೂ ನಾಯಕರು ನಿಕಟ ದ್ವಿಪಕ್ಷೀಯ ಸಂಬಂಧಗಳನ್ನು ಗಟ್ಟಿಗೊಳಿಸುವ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.