ಹೊಸ ಸಂಪುಟದಿಂದ ಹೊರಗಿಡುವಂತೆ ಸಿಎಂ ಸಿದ್ದರಾಮಯ್ಯಗೆ ಹೆಚ್​​ಡಿ ಕುಮಾರಸ್ವಾಮಿ ಆಗ್ರಹಿಸಿದ್ದು ಯಾವ ಸಚಿವಗೆ? ಯಾಕೆ?

ನಾಗಮಂಗಲ KSRTC ಚಾಲಕ ಜಗದೀಶ್​​ ಆತ್ಮಹತ್ಯೆಗೆ ಯತ್ನ ಪ್ರಕರಣದಲ್ಲಿ KSRTC ಚಾಲಕ ಜಗದೀಶ್ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆತ ತನ್ನ ಡೆತ್​ನೋಟ್​​ನಲ್ಲಿ ಸಚಿವ ಎನ್​​ ಚಲುವರಾಯಸ್ವಾಮಿ ಹೆಸರು ಪ್ರಸ್ತಾಪಿಸಿದ್ದಾರೆ. ಆದರೆ ಈವರೆಗೂ ಎಫ್​​ಐಆರ್ ದಾಖಲಾಗಿಲ್ಲ ಎಂದು ವಿಧಾನಸೌಧದಲ್ಲಿ ಮಾಜಿ ಸಿಎಂ ಹೆಚ್​​.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ವರ್ಗಾವಣೆ ದಂಧೆಯಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ. ಕಾಂಗ್ರೆಸ್​ ಸರ್ಕಾರ ರಾಜಕೀಯ ದ್ವೇಷ ಮಾಡುತ್ತಿದೆ ಎಂದು ಅವರು ಇದೇ ಸಂದರ್ಭದಲ್ಲಿ ಆರೋಪಿಸಿದರು. ಈ ಹಿನ್ನೆಲೆಯಲ್ಲಿ, ತಮ್ಮ ಹೊಸ ಸಂಪುಟದಿಂದ ಸಚಿವ ಎನ್​​ ಚಲುವರಾಯಸ್ವಾಮಿಯನ್ನು ಹೊರಗಿಡುವಂತೆ ಸಿಎಂ ಸಿದ್ದರಾಮಯ್ಯಗೆ ಹೆಚ್​​ಡಿ ಕುಮಾರಸ್ವಾಮಿ ಆಗ್ರಹಿಸಿದರು.