ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ

ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿತವಾಗಿ ಇಬ್ಬರು ಕೂಲಿ ಕಾರ್ಮಿಕರು ಸಿಲುಕಿಕೊಂಡಿದ್ದರು. ಓರ್ವ ಕೂಲಿ ಕಾರ್ಮಿಕನ ರಕ್ಷಣೆ ಮಾಡಲಾಗಿದ್ದು, ಮತ್ತೊಬ್ಬನಿಗಾಗಿ ರಕ್ಷಣಾ ಕಾರ್ಯಚರಣೆ ನಡೆದಿದೆ. ಮಂಗಳೂರು ನಗರದ ಬಲ್ಮಠ ಎಂಬಲ್ಲಿ ದುರಂತ ಸಂಭವಿಸಿದೆ. ಸದ್ಯ ಕಾರ್ಮಿಕನ ಕೈ ಕಾಣುತ್ತಿರುವುದರೊಂದಿಗೆ ಕಾರ್ಯಾಚರಣೆ ಮಧ್ಯೆಯೇ ಜಿಲ್ಲಾ ಆರೋಗ್ಯಾಧಿಕಾರಿ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ.