ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ತಲಾಂದ್ ಗ್ರಾಮದಲ್ಲಿ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಯುವಕನೋರ್ವ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯವನ್ನ ಪ್ರದರ್ಶಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಗ್ರಾಮದ ಸಾರ್ವಜನಿಕ ಗಣೇಶೋತ್ಸವ ಸಮಿತಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯುವಕ ನಿತಿನ್ ನಾಯ್ಕ ಪಂಜುರ್ಲಿ ನೃತ್ಯದ ಮೂಲಕ ಎಲ್ಲರ ಗಮನ ಸೆಳೆದಿದ್ದಾನೆ.