ಶಿಗ್ಗಾವಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಂತರ ನಡೆದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸಂಸತ್ತಿಗೆ ಆಯ್ಕೆಯಾಗಿದ್ದರಿಂದ ಶಿಗ್ಗಾವಿಗೆ ಉಪ ಚುನಾವಣೆ ನಡೆಸುವುದು ಅನಿವಾರ್ಯವಾಗಿತ್ತು. ಭರತ್ ಬೊಮ್ಮಯಿಗೆ ಟಿಕೆಟ್ ನೀಡಿದ್ದಕ್ಕೆ ಸ್ಥಳೀಯ ಬಿಜೆಪಿ ಪಾಳೆಯದಲ್ಲಿ ಅಸಮಾಧಾನ ಉಂಟಾಗಿತ್ತು ಎಂಬ ಮಾತಿದೆ.