BPL ​, APL ಕಾರ್ಡ್​ದಾರರಿಗೆ ಗುಡ್​ ನ್ಯೂಸ್​ ಕೊಟ್ಟ ಫುಡ್ ಮಿನಿಸ್ಟರ್!

ಬೆಂಗಳೂರು: ಆಗಸ್ಟ್​ 4: ಹೊಸದಾಗಿ ಪಡಿತರ ಕಾರ್ಡ್ ವಿತರಣೆಗೆ ಸೂಚನೆ ನೀಡಲಾಗಿದೆ ಎಂದು ಬೆಂಗಳೂರಿನಲ್ಲಿ ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ ಅವರು ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ. ಹಾಗಾಗಿ ಹೊಸದಾಗಿ BPL​, APL​ ಕಾರ್ಡ್​ಗೆ ಅರ್ಜಿ ಸಲ್ಲಿಸಬಹುದು. ನೀತಿಸಂಹಿತೆ ಜಾರಿ ಹಿನ್ನೆಲೆ ರೇಷನ್​​ ಕಾರ್ಡ್​ ವಿತರಣೆ ಸ್ಥಗಿತವಾಗಿತ್ತು. ಈಗ ಹೊಸ ಪಡಿತರ ಕಾರ್ಡ್​ ವಿತರಣೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಪಡಿತರ ಕಾರ್ಡ್​ಗೆ ಹೊಸ ಸದಸ್ಯರ ಹೆಸರು ಸೇರ್ಪಡೆಗೂ ಅವಕಾಶವಿದೆ. ಕಾರ್ಡ್​ನಲ್ಲಿರುವ ಮೃತರ ಹೆಸರನ್ನು ತೆರವುಗೊಳಿಸಲು ಸೂಚನೆ ನೀಡಲಾಗಿದೆ ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ.