Delhi Assembly Poll Results: ಈಗಾಗಲೇ ವರದಿಯಾಗಿರುವಂತೆ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುವುದರೊಂದಿಗೆ ಸುಮಾರು ಎರಡೂವರೆ ದಶಕಗಳ ನಂತರ ಅಧಿಕಾರಕ್ಕೆ ಬಂದಿದೆ. ಸೋಜಿಗ ಹುಟ್ಟಿಸುವ ಸಂಗತಿಯೆಂದರೆ ನಾಲ್ಕನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದ ಅರವಿಂದ್ ಕೇಜ್ರಿವಾಲ್ ಖುದ್ದು ಚುನಾವಣೆಯಲ್ಲಿ ಸೋತಿದ್ದು. ಗೆದ್ದಿರುವ ಬಿಜೆಪಿ ನಾಯಕರೆಲ್ಲ ಪ್ರಧಾನಿ ಮೋದಿಯವರ ಕಾರ್ಯವೈಖರಿಯಿಂದ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಾಯಿತು ಎನ್ನುತ್ತಿದ್ದಾರೆ.