ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ಈಗ ದೊಡ್ಡ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅರೆಸ್ಟ್ ಆಗಿದ್ದು ಪೊಲೀಸರು ವಿವಿಧ ಸಾಕ್ಷ್ಯಗಳನ್ನು ಕಲೆ ಹಾಕುತ್ತಿದ್ದಾರೆ. ರೇಣುಕಾ ಸ್ವಾಮಿಯನ್ನು ಶೆಡ್ಗೆ ಕರೆದುಕೊಂಡು ಹೋಗಿ ಹಲ್ಲೆ ಮಾಡಲಾಗಿತ್ತು. ಅದೇ ಶೆಡ್ಗೆ ಅಂದು ರಾತ್ರಿ ದರ್ಶನ್ ಅವರ ಕಾರು ಕೂಡ ಬಂದಿತ್ತು. ಅದಕ್ಕೆ ಸಾಕ್ಷಿ ಎಂಬಂತೆ ಸಿಸಿಟಿವಿ ದೃಶ್ಯ ಲಭ್ಯವಾಗಿದೆ. ಈ ಪ್ರಕರಣದಲ್ಲಿ ದರ್ಶನ್ ಜೊತೆ ಪವಿತ್ರಾ ಗೌಡ ಸೇರಿದ ಒಟ್ಟು 13 ಜನರ ಬಂಧನ ಆಗಿದೆ. ಎಲ್ಲರನ್ನೂ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಬಳಿಕ ಕೋರ್ಟ್ಗೆ ಹಾಜರುಪಡಿಸಲಾಗುವುದು.