ತನಗಿಂತ ಮುಂಚೆ ನಗರದ ಪೊಲೀಸ್ ಕಮೀಷನರ್ ಆಗಿ ಕೆಲಸ ಮಾಡಿರುವವರೆಲ್ಲ ಉತ್ತಮ ಕೆಲಸ ಮಾಡಿದ್ದಾರೆ, ತಾನೂ ಬೆಂಗಳೂರಲ್ಲಿ ಹೆಚ್ಚುವರಿ ಪೊಲೀಸ್ ಕಮೀಷನರ್ ಮತ್ತು ಡಿಸಿಪಿಯಾಗಿ ಕೆಲಸ ಮಾಡಿರುವುದಾಗಿ ಸೀಮಂತ್ ಕುಮಾರ್ ಸಿಂಗ್ ಹೇಳಿದರು. ನಗರದಲ್ಲಿ ಈಗಿರುವ ಪೊಲೀಸ್ ಅಧಿಕಾರಿಗಳೆಲ್ಲ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ, ಎಂದು ಅವರು ಹೇಳಿದರು.