ಮಂಜುನಾಥ್ ರಾವ್ ಅವರ ಅಂತಿಮ ಸಂಸ್ಕಾರದಲ್ಲಿ ಸರ್ಕಾರದ ಪರವಾಗಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭಾಗಿಯಾಗಲಿದ್ದಾರೆ. ಮಂಜುನಾಥ್ ಅವರ ಅಂತಿಮ ದರ್ಶನ ಪಡೆಯಲು ಜಿಲ್ಲಾಡಳಿತ ಸಕಲ ವ್ಯವಸ್ಥೆಯನ್ನು ಮಾಡಿದೆ ಮತ್ತು ಈ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಜರುಗದಂತೆ ಮನೆ ಸುತ್ತಲೂ ಬಿಗಿ ಪೊಲೀಸ್ ಭದ್ರತೆಯನ್ನು ಕಲ್ಪಿಸಲಾಗಿದೆ.