ದಿನಕ್ಕೊಂದು ತಿರುವು ಪಡೆಯುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಈಗ ಮತ್ತೊಂದು ಬಿಗ್ ಟ್ವಿಸ್ಟ್ ದೊರೆತಿದೆ. ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್ ಪರಿಚಯವೇ ಇಲ್ಲ, ಆದರೆ ಒಮ್ಮೆ ಮಾತ್ರ ಭೇಟಿಯಾಗಿದ್ದ ಎಂದು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಈ ಹಿಂದೆ ಹೇಳಿದ್ದರು. ಆದರೆ ಈಗ ಕಾರ್ತಿಕ್, ಶ್ರೇಯಸ್, ಪುಟ್ಟರಾಜು ಜತೆಗೆ ಇರುವ ಫೋಟೋಗಳು ವೈರಲ್ ಆಗಿವೆ.