ನಿಖಿಲ್ ಕುಮಾರಸ್ವಾಮಿ ಗೆದ್ದಾಕ್ಷಣ ತಾನು ವಿಶ್ರಮಿಸುವ ಪ್ರಯತ್ನ ಮಾಡಲ್ಲ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕಿದೆ, ತನ್ನ 62-ವರ್ಷಗಳ ರಾಜಕೀಯ ಜೀವನದಲ್ಲಿ ಇಂಥ ಕೆಟ್ಟ ಸರ್ಕಾರವನ್ನು ಯಾವತ್ತೂ ನೋಡಿರಲಿಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದರು.