ಅಂಗಾಂಗ ದಾನ ಬಹಳ ಮುಖ್ಯವಾದುದು. ಆದರೆ ಅದರ ಬಗ್ಗೆ ಹೆಚ್ಚಿನ ಜಾಗೃತಿ ಇಲ್ಲ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಷಾದ ವ್ಯಕ್ತಪಡಿಸಿದ್ದಾರೆ. ಮೂಢನಂಬಿಕೆಯಿಂದಾಗಿ ಬಹಳಷ್ಟು ಜನ ಅಂಗಾಂಗ ದಾನ ಮಾಡುವುದಕ್ಕೆ ಮುಂದೆ ಬರುತ್ತಿಲ್ಲ. ಹಾಗಾಗಿ ಸ್ವಾಮೀಜಿಗಳು, ಸಮಾಜದ ಗಣ್ಯರಿಂದ ಈ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ. ಸರ್ಕಾರದ ವತಿಯಿಂದಲೂ ಅಂಗಾಂಗ ದಾನದ ಬಗ್ಗೆ ಹೆಚ್ಚಿನ ಪ್ರಚಾರ ಕೈಗೊಳ್ಳುತ್ತೇವೆ ಎಂದು ಅವರು ಭರವಸೆಯ ಮಾತುಗಳನ್ನಾಡಿದರು.