ಕರ್ನಾಟಕದ ಹಲವೆಡೆ ಬೇಸಗೆ ಮಳೆ ಶುರುವಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಹಲವೆಡೆ ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಮಳೆ ತುಸು ತಂಪೆರೆದಿದೆ. ಇದೀಗ ಮೈಸೂರು ಜಿಲ್ಲೆಯಲ್ಲೂ ಮಳೆಯಾಗಿದೆ. ಸೋಮವಾರ ಸಂಜೆ ಹಾಗೂ ರಾತ್ರಿ ಸುರಿದ ಭರ್ಜರಿ ಮಳೆ ಜನರನ್ನು ಹರ್ಷಚಿತ್ತರನ್ನಾಗಿಸಿದೆ.