ರಾಘವೇಂದ್ರ ಮುಂಭಾಗದ ಸಾಲಿನಲ್ಲಿ ಕುಳಿತಿದ್ದರೆ ಈಶ್ವರಪ್ಪ ಹಿಂಭಾಗದ ಸಾಲಿನಲ್ಲಿ ಗಂಬೀರ ಮುಖಮುದ್ರೆಯೊಂದಿಗೆ ಆಸೀನರಾಗಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ತಮ್ಮ ಮಗ ಕಾಂತೇಶ್ ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡದ ಕಾರಣ ಬಿಜೆಪಿ ನಾಯಕತ್ವದ ವಿರುದ್ಧ ಸಿಡಿದೆದ್ದಿರುವ ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.